ಕಾಟಿಪಳ್ಳ: ಮಿಸ್ಬಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ, ಜಾಗೃತಿ ಅಭಿಯಾನ
ಕಾಟಿಪಳ್ಳ: ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಮಾದಕ ವಸ್ತುಗಳ ದುಷ್ಪರಿಣಾಮದ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಮಿಸ್ಬಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಜಾಗೃತಿ ಕಾರ್ಯಗಾರ ಗುರುವಾರ ನಡೆಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪೋಲಿಸ್ ಅಧಿಕಾರಿ ರಾಘವೇಂದ್ರ ರೈ ಅವರು ಕಾಲೇಜಿನ ವಿದ್ಯಾರ್ಥಿನಿಯರಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಅದನ್ನು ತಡೆಗಟ್ಟಲು ಕಾನೂನಿನ ಕುರಿತು ಮಾಹಿತಿ ನೀಡಿದರು.
ಯುವ ಜನತೆಯು ಈ ದಾರಿಯತ್ತ ಆಕರ್ಷಿತರಾಗದೆ ಆರೋಗ್ಯಕರ ಜೀವನ ಶೈಲಿಗೆ ಬದ್ಧರಾಗ ಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಈ ಜಾಗೃತಿ ಅಭಿಯಾನದಲ್ಲಿ ಯುವಜನತೆ, ಪೋಷಕರು, ಶಿಕ್ಷಕರು ಮತ್ತು ಸಮಾಜದ ಪ್ರತಿಯೊಬ್ಬರು ಜಾಗೃತರಾಗಿ ಪಾಲ್ಗೊಂಡು ಯುವಜನತೆಯನ್ನು ಈ ದೃಷ್ಟವಲಯದಿಂದ ದೂರ ಇರಿಸಲು ಪ್ರಯತ್ನಿಸಬೇಕೆಂದು ಹೇಳಿದರು. ಬಳಿಕ ವಿದ್ಯಾರ್ಥಿನಿಯರ ಜೊತೆಗೆ ಸಂವಾದ ನಡೆಸಿದರು.
ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮುಫೀದ, ಉಪನ್ಯಾಸಕರು, ವಿದ್ಯಾರ್ಥಿನಿಯರು ಮತ್ತು ಪೊಲೀಸ್ ಅಧಿಕಾರಿ ಶಿವರಾಮ್ ಉಪಸ್ಥಿತರಿದ್ದರು