×
Ad

ಕಾಟಿಪಳ್ಳ: ಮಿಸ್ಬಾಹ್ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Update: 2025-07-11 14:25 IST

ಕಾಟಿಪಳ್ಳ : ಮಿಸ್ಬಾಹ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಜಹೀದಾ ಜಲೀಲ್ ಅವರು ಮಾತನಾಡಿ, ವಿಶ್ವ ಜನಸಂಖ್ಯಾ ದಿನವು ಜನರಿಗೆ ಜನಸಂಖ್ಯೆಯ ನಿಯಂತ್ರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಮಹತ್ವವನ್ನು ಅರಿವಿಗೆ ತರುವ ವಿಶೇಷ ದಿನವಾಗಿದೆ ಎಂದರು.

ಜನಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರತಿ ವ್ಯಕ್ತಿಯೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಮಹಿಳೆಯರ ಶಿಕ್ಷಣ ಮತ್ತು ಸಬಲೀಕರಣವು ಉತ್ತಮ ಕುಟುಂಬ ನಿರ್ಮಾಣಕ್ಕೆ, ಆರೋಗ್ಯದ ರಕ್ಷಣೆ ಹಾಗೂ ಸಮಾಜದ ಅಭಿವೃದ್ಧಿಗೆ ಬಹಳ ಮುಖ್ಯವಾಗಿದೆ. ವಿದ್ಯಾರ್ಥಿನಿಯರು ಸಮಾಜದಲ್ಲಿ ಅರಿವು ಮೂಡಿಸುವ ಕೆಲಸದಲ್ಲಿ ಮುಂಚೂಣಿಯಲ್ಲಿ ಇರಬೇಕು ಎಂದು ಅವರು ಕರೆ ನೀಡಿದರು.”

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿನಿಯರು “Small steps today, Giant leaps tomorrow,” “Empowering Choices, Sustainable Futures” ಎಂಬ ಘೋಷಣೆಯನ್ನು ಕೂಗಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News