ವಾರ್ತಾಭಾರತಿಯ ಕೆ.ಎಂ ಇಸ್ಮಾಯೀಲ್ ಕಂಡಕರೆ ಗೆ ಪ.ಗೋ. ಪ್ರಶಸ್ತಿ ಪ್ರದಾನ

Update: 2024-05-09 18:27 GMT

ಮಂಗಳೂರು, ಮೇ 9: ಸಮಾಜದ ದಿಕ್ಕನ್ನು ನಿಯಂತ್ರಿಸುವ ಶಕ್ತಿಯನ್ನು ಹೊಂದಿರುವ ಮಾಧ್ಯಮಗಳು ತಮ್ಮ ಮೇಲಿರುವ ಸಾಮಾಜಿಕ ಜವಾಬ್ದಾರಿಯನ್ನು ಯಾವತ್ತೂ ಮರೆಯಬಾರದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯ ಮಡಿಕೇರಿಯ ವಿಶೇಷ ವರದಿಗಾರ ಕೆ.ಎಂ ಇಸ್ಮಾಯೀಲ್ ಕಂಡಕರೆ ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಅವರು ಪ್ರಶಸ್ತಿ ಪುರಸ್ಕೃತ ಇಸ್ಮಾಯೀಲ್ ಕಂಡಕರೆ ಅವರ ಪರಿಚಯ ಮಾಡಿದರು. ಪ್ರಶಸ್ತಿ ಪುರಸ್ಕೃತ ಇಸ್ಮಾಯೀಲ್ ಕಂಡಕರೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. 

ಪ್ರಶಸ್ತಿಯ ಆಯ್ಕೆ ಸಮಿತಿ ಸದಸ್ಯರಾದ ಕೇಶವ ಕುಂದರ್ ಮತ್ತು ಗುರುಪ್ರಸಾದ್ ಟಿ.ಎನ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕುಲಪತಿಯಾದ ಬಳಿಕ ಮಂಗಳೂರು ಪ್ರೆಸ್ ಕ್ಲಬ್‌ಗೆ ಮೊದಲ ಬಾರಿಗೆ ಆಗಮಿಸಿದ ಪ್ರೊ. ಪಿ.ಎಲ್. ಧರ್ಮ ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ಆರ್.ರಾಮಕೃಷ್ಣ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕರ್ನಾಟಕ ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಕೆಯುಡಬ್ಲ್ಯುಜೆ ಮಹಾರಾಷ್ಟ್ರ ಘಟಕದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಪದ್ಯಾಣ ಗೋಪಾಲ ಕೃಷ್ಣ ಅವರ  ಪುತ್ರ ವಿಶ್ವೇಶ್ವರ ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮುಹಮ್ಮದ್ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News