×
Ad

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ನೇಮಕ

Update: 2025-03-15 14:18 IST

ಸುಳ್ಯ:ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ನೇಮಕಗೊಂಡಿದ್ದಾರೆ. ಕೆ.ಎಂ.ಮುಸ್ತಫ ನಾಲ್ಕು ಬಾರಿ ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಸುಳ್ಯ ನಗರಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚಿಸಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಇತ್ತೀಚೆಗೆ ಆದೇಶ  ಹೊರಡಿಸಿತ್ತು. ಯೋಜನಾ ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ನಡೆದಿದ್ದು,  ಸದಸ್ಯರ ನೇಮಕ ಮಾಡುವ ಸಾಧ್ಯತೆ ಇದೆ. 2011 ರಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯಡಿಯಲ್ಲಿ ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ಸ್ಥಳೀಯ ಯೋಜನಾ ಪ್ರದೇಶವನ್ನಾಗಿ ಘೋಷಿಸಿ ಸುಳ್ಯ ಪಟ್ಟಣ ಪಂಚಾಯತ್ ಯೋಜನಾ ಪ್ರಾಧಿಕಾರ ಎಂದು ಆದೇಶಿಸಲಾಗಿತ್ತು.

ಅದರಂತೆ ಸುಳ್ಯವನ್ನು ಇದೀಗ ಪ್ರತ್ಯೇಕ ಯೋಜನಾ ಪ್ರಾಧಿಕಾರವಾಗಿ ಪರಿಗಣಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿನ ಅಭಿವೃದ್ಧಿಗಳನ್ನು ನಿಯಂತ್ರಿಸಲು ಮತ್ತು ಮಹಾ ಯೋಜನೆ ತಯಾರಿಸಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯನ್ವಯ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚಿಸಿ ಆದೇಶಿಸಲಾಗಿದೆ. ಈ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ಸರ್ಕಾರದಿಂದ ನೇಮಿಸಲಾಗುತ್ತದೆ. ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಸುಳ್ಯ ಪಟ್ಟಣ ಪಂಚಾಯತ್‌ನ ಚುನಾಯಿತ ಸದಸ್ಯರೊಬ್ಬರು ಮತ್ತು ಪಂಚಾಯತ್‌ನ ಮುಖ್ಯಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಾಗಿ ಇರಲಿದ್ದು, ಸರ್ಕಾರದಿಂದ ನೇಮಿಸಲ್ಪಡುವ ಮೂರು ಮಂದಿ ಇತರ ಸದಸ್ಯರು ಅಧಿಕಾರೇತರ ಸದಸ್ಯರಾಗಿರುತ್ತಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News