×
Ad

ಕೊಣಾಜೆ: ಕೊಲೆ ಯತ್ನ ಪ್ರಕರಣ; ಆರೋಪಿ ಸೆರೆ

Update: 2023-08-29 22:38 IST

ಮಂಗಳೂರು: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಮೀರ್ ಹಂಝ (39) ಎಂದು ಗುರುತಿಸಲಾಗಿದೆ.

ಆಗಸ್ಟ್ 12 ರಂದು ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ಸಮೀರ್ ಹಂಝ ಗಲಾಟೆ ಮಾಡಿ, ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಸಮೀರ್ ಹಂಝ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಲ್ಯಾಸ್ ಕೊಲೆ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 3 ಕೊಲೆ ಯತ್ನ ಪ್ರಕರಣಗಳು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಅಪಹರಣ, ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ, ಪೊಲೀಸ್ ನಿರೀಕ್ಷರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್ಐ ರಾಜೇಂದ್ರ ಬಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News