ಕೊಣಾಜೆ | ಎ.21 ರಂದು ‘ಕನಕ ಸ್ಮೃತಿ’ ಕಾರ್ಯಕ್ರಮ
ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ‘ಕನಕ ಸ್ಮೃತಿ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವು ಎ.21ರ ಸೋಮವಾರ, ಅಪರಾಹ್ನ 2.30 ಗಂಟೆಗೆ ಮಂಗಳಗಂಗೋತ್ರಿಯ ಡಾ.ಯು.ಆರ್.ರಾವ್ (ಹಳೆಯ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಎಲ್ ಧರ್ಮ ಅವರು ವಹಿಸಲಿದ್ದು, ಬೆಂಗಳೂರಿನ ಪ್ರಸಿದ್ಧ ಚಲನಚಿತ್ರ ಹಿನ್ನಲೆ ಗಾಯಕರು, ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ಕಲಾಶ್ರೀ ರಮೇಶ್ಚಂದ್ರ ಇವರು ವಿಶೇಷ ಉಪನ್ಯಾಸ ನೀಡಲಿರುವರು.
ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ರಘುರಾಜ್ ಕದ್ರಿ ಗೌರವ ಉಪಸ್ಥಿತರಿದ್ದು, ಈ ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮದಲ್ಲಿ ವಿಜೇತರಾದ 19 ಅಭ್ಯರ್ಥಿಗಳಿಗೆ ಮತ್ತು ಮೂರು ತಂಡಗಳಿಗೆ ‘ಕನಕ ಪುರಸ್ಕಾರ ಪ್ರದಾನ ಮತ್ತು ಕೀರ್ತನ ಪ್ರಸ್ತುತಿ’ ನಡೆಯಲಿದೆ ಹಾಗೂ ವಿವಿಧ ಶಾಲೆಗಳಲ್ಲಿ ಏರ್ಪಡಿಸಿದ ಕನಕಾಭಿಯಾನ – ಶಾಲಾ ವಿದ್ಯಾರ್ಥಿಗಳಿಗೆ ಕನಕ ಚಿಂತನೆ ಪ್ರಸಾರ ಕಾರ್ಯಕ್ರಮ – ಕನಕದಾಸರ ಜೀವನ ಮತ್ತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಧನಂಜಯ ಕುಂಬ್ಳೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ