ಕೋಟೆಪುರ: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಅಧಿಕಾರಿಗಳಿಂದ ದಾಳಿ; ಆರೋಪಿ ಸೆರೆ
Update: 2024-01-18 21:32 IST
ಉಳ್ಳಾಲ: ಠಾಣೆ ವ್ಯಾಪ್ತಿಯ ಕೋಟೆಪುರದ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಆರೋಪಿ ಸಮೇತ ಗ್ಯಾಸ್ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಅಬ್ದುಲ್ ಅಲ್ತಾಫ್ (49) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗೆ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನು ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್, ಸಿಬ್ಬಂದಿ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಾಳಿ ನಡೆಸಿ ಸುಮಾರು 55ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲ್ ವಶ ಪಡಿಸಿಕೊಂಡಿದ್ದಾರೆ.