ಸಜೀಪ: ಅಪಘಾತದಿಂದ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿದ ಕೆಎಸ್ಸಾರ್ಟಿಸಿ ಬಸ್
Update: 2023-09-23 15:39 IST
ಬಂಟ್ವಾಳ: ದ್ವಿಚಕ್ರ ವಾಹನವನ್ನು ಹಿಂದಿಕ್ಕಲು ಮುಂದಾದ ಟೆಂಪೋ ರಿಕ್ಷಾವನ್ನು ಸಂಭವನೀಯ ಅಪಘಾತದಿಂದ ತಪ್ಪಿಸಲು ಹೋದ ಸರಕಾರಿ ಬಸ್ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಟೆಂಪೋ ರಿಕ್ಷಾ ಚಾಲಕ ದ್ವಿಚಕ್ರ ವಾಹನ ಆಕ್ಟಿವಾ ವನ್ನು ಓವರ್ ಟೇಕ್ ಮಾಡಲು ಹೋಗಿದ್ದು ಈ ಸಂದರ್ಭ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ತಿರುಗಿದ್ದು, ಈ ಸಂದರ್ಭ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.