×
Ad

ಕುದ್ಕೋಳಿ | ಬೆಂಕಿ ಆಕಸ್ಮಿಕ: ಸಂಪೂರ್ಣ ಹೊತ್ತಿ ಉರಿದ ಡಸ್ಟರ್ ಕಾರು

Update: 2024-04-08 13:12 IST

ಬಂಟ್ವಾಳ : ಡಸ್ಟರ್ ಕಾರೊಂದು ಆಕಸ್ಮಿಕವಾಗಿ ಉಂಟಾದ ಬೆಂಕಿಯಿಂದ ಹೊತ್ತಿ ಉರಿದ ಘಟನೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ತಕ್ಷಣ ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ.

ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ - ಮೂಡುಬಿದಿರೆ ರಸ್ತೆ ತಡೆ ಉಂಟಾಗಿತ್ತು ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News