ಕುಡುಪು ಗುಂಪು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
ಸಾಂದರ್ಭಿಕ ಚಿತ್ರ
ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪದ ಗುಂಪು ಥಳಿತದಿಂದ ಹತ್ಯೆಯಾದ ವಯನಾಡಿನ ಅಶ್ರಫ್ ಕೊಲೆ ಪ್ರಕರಣದ ಮೂವರು ಆರೋಪಿಗಳ ಅರ್ಜಿಯನ್ನು ದ.ಕ.ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ಎ.27ರ ಅಪರಾಹ್ನ ಅಪರಿಚಿತ ವ್ಯಕ್ತಿಯನ್ನು 30ಕ್ಕೂ ಅಧಿಕವಿದ್ದ ಗುಂಪು ಥಳಿಸಿ ಕೊಂದಿತ್ತು. ತನಿಖೆಯ ಬಳಿಕ ಹತ್ಯೆಯಾದ ವ್ಯಕ್ತಿಯನ್ನು ಕೇರಳದ ವಯನಾಡಿನ ಅಶ್ರಫ್ ಎಂದು ಗುರುತಿಸಲಾಗಿತ್ತು.
ಬಳಿಕ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ಸಂದೀಪ್, ವಿವಿಯನ್ ಅಲ್ವಾರಿಸ್, ಶ್ರೀದತ್ತ, ರಾಹುಲ್, ಪ್ರದೀಪ್ ಕುಮಾರ್, ಮನೀಶ್ ಶೆಟ್ಟಿ, ಧನುಷ್, ದೀಕ್ಷಿತ್, ಕಿಶೋರ್ ಕುಮಾರ್ ಮತ್ತಿತರರನ್ನು ಬಂಧಿಸಿತ್ತು.
ಈ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಆ ಪೈಕಿ ಪ್ರದೀಪ್ ಕುಮಾರ್, ಮನೀಶ್ ಶೆಟ್ಟಿ, ಅನಿಲ್ ಕುಮಾರ್ ಎಂಬವರ ಅರ್ಜಿಯು ತಿರಸ್ಕೃತಗೊಂಡಿರುವುದಾಗಿ ತಿಳಿದು ಬಂದಿದೆ.