ಕೂಳೂರು: ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು
Update: 2024-04-19 14:44 IST
ಮಂಗಳೂರು, ಎ.19: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.