×
Ad

ಕುಂಬ್ರ: ಶೇಖಮಲೆಯಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

Update: 2024-07-30 13:54 IST

ಪುತ್ತೂರು: ಗುಡ್ಡ ಕುಸಿತದಿಂದ ರಸ್ತೆ ಸಂಚಾರ ಬಂದ್‌ ಆಗಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಶೇಖಮಲೆ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.  

ಗುಡ್ಡ ಕುಸಿತದಿಂದಾಗಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದ್ದು, ಹಲವಾರು ವಿದ್ಯುತ್ ಕಂಬಗಲೂ ನೆಲಕ್ಕುರುಳಿವೆ. ಗುಡ್ಡ ಕುಸಿತ ಮುಂದುವರಿದಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಸ್ಥಳಕ್ಕೆ ಸಂಪ್ಯ ಗ್ರಾಮಾಂತರ ಪೊಲೀಸರು ತೆರಳಿ ಬ್ಯಾರಿಕೇಡ್ ಅಳವಡಿಸಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News