×
Ad

ಕುತ್ತಾರ್: ವಸತಿ ಸಂಕೀರ್ಣದ 12ನೇ ಮಹಡಿಯಿಂದ ಬಿದ್ದು ಬಾಲಕಿ ಮೃತ್ಯು

Update: 2025-06-13 10:48 IST

ಉಳ್ಳಾಲ: ವಾಸ್ತವ್ಯವಿದ್ದ ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ದೇರಳಕಟ್ಟೆಯ ಯೆನಪೊಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹ್ಮದ್ ಮತ್ತು ಖಮರ್ಜಹಾ ಬಾನು ಎಂಬವರ ಪುತ್ರಿ ಹಿಬಾ ಐಮನ್(15) ಮೃತಪಟ್ಟ ಬಾಲಕಿ.

ಹಿಬಾ ಐಮನ್ ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

18 ಮಹಡಿ ಹೊಂದಿರುವ ಕುತ್ತಾರಿನ ಖಾಸಗಿ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದೆ. ಗುರುವಾರ ರಾತ್ರಿ ದಂಪತಿ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು. ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರೆನ್ನಲಾಗಿದೆ. ಈ ವೇಳೆ ಹಿಬಾ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕಲೆಂದು ಕುರ್ಚಿಯಲ್ಲಿ ನಿಂತಿದ್ದ ವೇಳೆ ಆಯತಪ್ಪಿ ವಸತಿ ಸಂಕೀರ್ಣದಿಂದ ಕೆಳಗಡೆ ಬಿದ್ದು ಮೃತಪಟ್ಟಿದ್ದಾರೆ ಎಂದು ಉಳ್ಳಾಲ ಪೊಲೀಸರು ತಿಳಿಸಿದ್ದಾರೆ.

ಹಿಬಾ ಮಂಗಳೂರಿನ ಯೆನೆಪೊಯ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದರು,

ಈ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News