ಕುತ್ತಾರು : ಅಪರಿಚಿತ ವಾಹನ ಢಿಕ್ಕಿ; ಪಾದಚಾರಿ ಮೃತ್ಯು
Update: 2026-03-11 12:53 IST
ಉಳ್ಳಾಲ: ಅಪರಿಚಿತ ವಾಹನ ಢಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕುತ್ತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮುನ್ದೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತ ಪಟ್ಟವರು.
ಘಟನೆ ವಿವರ: ಮಂಗಳವಾರ ರಾತ್ರಿ ಅಂಗಡಿಗೆ ತೆರಳಿದ್ದ ದಿನೇಶ್ ಗಟ್ಟಿ ಅವರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಢಿಕ್ಕಿ ಹೊಡೆದು ಪರಾರಿ ಆಗಿದ್ದಾನೆ ಎನ್ನಲಾಗಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡ ದಿನೇಶ್ ಗಟ್ಟಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.