ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ನಡೆಸಿದ ಸ್ಥಳೀಯರು ಹಾಗೂ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ. ಖಾದರ್ ಕೃತಜ್ಞತೆ
Update: 2025-05-30 23:21 IST
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅದರಲ್ಲೂ ಉಳ್ಳಾಲ ತಾಲೂಕಿನ ವಿವಿಧ ಕಡೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಭಾರೀ ಮಳೆಯಿಂದ ಗುಡ್ಡ ಕುಸಿತ, ಕೃತಕ ನೆರೆ ಸಂಭವಿಸಿ ಪ್ರಾಣ ಹಾನಿ ಹಾಗೂ ಆಸ್ತಿ ಪಾಸ್ತಿಗಳಿಗೆ ನಷ್ಟ ಸಂಭವಿಸಿದೆ. ಶುಕ್ರವಾರ ಮುಂಜಾನೆಯಿಂದಲೇ ಸ್ಥಳೀಯರು ಹಾಗೂ ಅಧಿಕಾರಿಗಳ ತಂಡ ರಕ್ಷಣಾ ಕಾರ್ಯಾಚರಣೆ ಹಾಗೂ ಮುಂಜಾಗೃತಾ ಕ್ರಮಗಳಲ್ಲಿ ಕಾರ್ಯಪ್ರವೃತ್ತರಾಗಿದ್ದು ಪ್ರತಿಯೊಬ್ಬರಿಗೂ ವೈಯುಕ್ತಿಕ ಹಾಗೂ ಕ್ಷೇತ್ರದ ಜನತೆಯ ಪರವಾಗಿ ಸ್ಪೀಕರ್ ಯು.ಟಿ.ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಂಭವವಿದ್ದು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ರಕ್ಷಣೆ ಹಾಗೂ ಮುಂಜಾಗೃತ ಕ್ರಮಗಳ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.