ದ.ಕ.ಜಿಲ್ಲೆಯಲ್ಲಿ ಮಿಷನ್ ಇಂದ್ರಧನುಷ್‌ಗೆ ಚಾಲನೆ
ಮಂಗಳೂರು,ಆ.7: ಉತ್ತಮ ಆರೋಗ್ಯದಿಂದ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ. ಈ ದಿಸೆಯಲ್ಲಿ ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಇಲಾಖೆುಂದ ನಿಯಮಿತವಾಗಿ ನೀಡಲಾಗುವ ಲಸಿಕೆಗಳನ್ನು ಪೋಷಕರು ಮಕ್ಕಳಿಗೆ ಕೊಡಿಸು ವಂತೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕರೆ ನೀಡಿದರು.
ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸುರತ್ಕಲ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೃಷ್ಣಾಪುರ ಐದನೇ ಬ್ಲಾಕ್ ನಲ್ಲಿರುವ ಯುವಕ ಮಂಡಲ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆದ ಮಿಷನ್ ಇಂದ್ರಧನುಷ್ 5.0 ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಆರೋಗ್ಯ ಪೂರ್ಣ ಜೀವನದಿಂದ ಶೈಕ್ಷಣಿಕವಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಆರೋಗ್ಯ ಇಲಾಖೆಯ ಸೇವೆಗಳು ಜನರಿಗೆ ತಲುಪಲು ಎಲ್ಲರ ಸಹಭಾಗಿತ್ವ ಮುಖ್ಯ. ಇಂದು ನೀಡಲಾಗುತ್ತಿರುವ ಲಸಿಕೆಗಳು ಅರ್ಹವಿರುವ ಪ್ರತಿ ಯೊಂದು ಮಗುವಿಗೂ ತಲುಪಬೇಕು ಎಂದು ಡಿಸಿ ಕರೆ ನೀಡಿದರು.
ಶಾಸಕ ಡಾ. ಭರತ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ.ಜಿಪಂ ಸಿಇಒ ಡಾ.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಕಿಶೋರ್ ಕುಮಾರ್, ಡಾ.ರಾಜೇಶ್, ಡಾ.ಸುಜಯ್, ಕಾರ್ಪೊರೇಟರ್ ಲಕ್ಷ್ಮಿಶೇಖರ ದೇವಾಡಿಗ, ಶ್ವೇತಾ ಪೂಜಾರಿ, ಯುವಕ ಮಂಡಲದ ಅಧ್ಯಕ್ಷ ಶಿವಪ್ರಸಾದ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.