×
Ad

ನಮ್ಮ ಭಾಷೆಯನ್ನು ಮೊದಲು ನಾವೇ ಪ್ರೀತಿಸೋಣ: ಪ್ರೊ.ಅಜಿತ್ ಪ್ರಸಾದ್

Update: 2025-11-04 15:40 IST

ಕೊಣಾಜೆ, ನ.4: ಭಾಷೆ ಬಳಕೆ ಆದಾಗ ಮಾತ್ರ ನಾಲಿಗೆಗೆ ಒಗ್ಗುತ್ತೆ. ಹಾಗಾಗಿ ನಮ್ಮ ಭಾಷೆಯನ್ನು ಮೊದಲು ನಾವೇ ಪ್ರೀತಿಸೋಣ. ಕನ್ನಡ ಭಾಷೆಯನ್ನು ಬಳಸುವ ಮೂಲಕ ರಾಜ್ಯ ಪ್ರೇಮವನ್ನು ತೋರೋಣ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಅಜಿತ್ ಪ್ರಸಾದ್‌ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ.ವಿವೇಕ ರೈ ವಿಚಾರ ವೇದಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಭಾಷೆಯನ್ನು ನಾವು ಬಹುತ್ವದ ನೆಲೆಯಲ್ಲಿ ನೋಡಬೇಕು. ಮಾತನಾಡುವಾಗ ಮೈಚಳಿ ಬಿಟ್ಟು ಮಾತನಾಡಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ರಾಜು ಮೊಗವೀರ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಮಂಗಳೂರು ವಿವಿಯ ಹಣಕಾಸು ಸಚಿವ ಪಂಚಲಿಂಗ ಸ್ವಾಮಿ, ಪರೀಕ್ಷಾಂಗ ಕುಲಸಚಿವ ದೇವೇಂದ್ರಪ್ಪ, ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ, ನಾಗಪ್ಪ ಗೌಡ ಉಪಸ್ಥಿತರಿದ್ದರು.

ಪ್ರೊ.ಸೋಮಣ್ಣ ಹೊಂಗಳ್ಳಿ ಸ್ವಾಗತಿಸಿದರು. ಡಾ.ಧನಂಜಯ ಕುಂಬ್ಳೆ ವಂದಿಸಿದರು. ಡಾ.ಯಶುಕುಮಾರ್ ಡಿ. ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News