×
Ad

ದ.ಕ.ಜಿಲ್ಲಾ ಕಾಂಗ್ರೆಸ್‌ನಿಂದ ಮಹಾಪರಿನಿರ್ವಾಣ ದಿನಾಚರಣೆ

Update: 2025-12-06 22:00 IST

ಮಂಗಳೂರು, ಡಿ.6: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿತ ವತಿಯಿಂದ ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನಾಚರಣೆಯು ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿ, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ದೇಶದ ಧೀಮಂತ ನಾಯಕ. ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಿ ಭಾರತವನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯಲು ಅವರು ಶ್ರಮಿಸಿದರು. ನಾವು ಅವರ ತತ್ವಾದರ್ಶ, ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ ಆಶಯಗಳನ್ನು ರಕ್ಷಿಸಬೇಕು ಎಂದು ಹೇಳಿದರು.

ಈ ಸಂದರ್ಭ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಇಬ್ರಾಹೀಂ ನವಾಝ್, ಎಸ್.ಅಪ್ಪಿ, ಡಿಸಿಸಿ ಉಪಾಧ್ಯಕ್ಷರಾದ ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಡೆನ್ನಿಸ್ ಡಿಸಿಲ್ವ, ಮುಖಂಡರಾದ ಕೆ.ಪಿ. ಥೋಮಸ್, ಶಬೀರ್ ಸಿದ್ದಕಟ್ಟೆ, ವಿಕಾಸ್ ಶೆಟ್ಟಿ, ಜೀತೇಂದ್ರ ಸುವರ್ಣ, ಸಬಿತಾ ಮಿಸ್ಕಿತ್, ಆಲ್ವೇನ್ ಪ್ರಕಾಶ್, ಹೈದರ್ ಬೋಳಾರ್, ಸಮರ್ಥ್ ಭಟ್, ನೆಲ್ಸನ್, ಕೇಶವ ಮರೋಳಿ, ಟಿ.ಟಿ. ಗಣೇಶ್, ಪ್ರಶಾಂತ್ ಅಮೀನ್, ಜಾರ್ಜ್, ಜಮಾಲ್ ಸುಳ್ಯ, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

ದ.ಕ.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕ ಅಧ್ಯಕ್ಷ ದಿನೇಶ್ ಮುಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಫಾಯಿ ಕರ್ಮಚಾರಿ ಘಟಕದ ಅಧ್ಯಕ್ಷ ಪ್ರೇಮ್ನಾಥ್ ಬಳ್ಳಾಲ್ಭಾಗ್ ಸ್ವಾಗತಿಸಿದರು. ಡಿಸಿಸಿ ಉಪಾಧ್ಯಕ್ಷ ಟಿ.ಹೊನ್ನಯ್ಯ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News