×
Ad

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Update: 2025-08-20 18:56 IST

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ 16 ಮಂದಿ ಆರೋಪಿಗಳಿಗೆ ಆ.20ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು. ಆ.20 ರಂದು ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ಜಯಂತ್.ಟಿ ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ , ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು. ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ.

ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸಮೊಟೊ ಪ್ರಕರಣ, ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು. ಅದರಂತೆ ಬೆಳ್ತಂಗಡಿ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ಹಾಜರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News