×
Ad

ಪಾಣಾಜೆ ಗ್ರಾಪಂ ಅಧ್ಯಕ್ಷರಾಗಿ ಮೈಮೂನತುಲ್ ಮೆಹ್ರಾ, ಉಪಾಧ್ಯಕ್ಷರಾಗಿ ಜಯಶ್ರೀ ಆಯ್ಕೆ

Update: 2023-08-16 21:53 IST

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್‍ನಲ್ಲಿ 2ನೇ ಅವಧಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಬುಧವಾರ ನಡೆದಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮೈಮೂನತುಲ್ ಮೆಹ್ರಾ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಜಯಶ್ರೀ ಅವರು ಆಯ್ಕೆಯಾಗಿದ್ದಾರೆ.

ಒಟ್ಟು 10 ಸದಸ್ಯ ಬಲವಿರುವ ಪಾಣಾಜೆ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತ 5, ಕಾಂಗ್ರೆಸ್ ಬೆಂಬಲಿತ 3 ಹಾಗೂ 2 ಪಕ್ಷೇತರ ಸದಸ್ಯರಿದ್ದಾರೆ. ಸಾಮಾನ್ಯ ವರ್ಗದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಮೈಮೂನತುಲ್ ಮೆಹ್ರಾ ಮತ್ತು ಬಿಜೆಪಿ ಬೆಂಬಲಿತ ಸುಭಾಶ್ ಅವರಿಬ್ಬರಿಗೂ ತಲಾ 5ರಂತೆ ಸಮಾನ ಮತಗಳು ಲಭ್ಯವಾಗಿತ್ತು. ಈ ಹಿನ್ನಲೆಯಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರ ಆಯ್ಕೆ ನಡೆಸಲಾಯಿತು. ಅದರಲ್ಲಿ ಮೈಮೂನತುಲ್ ಮೆಹ್ರಾ ಅವರು ಅಧ್ಯಕ್ಷರಾಗಿ ಆಯ್ಕೆಯಾದರು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಜಯಶ್ರೀ ಮತ್ತು ಕಾಂಗ್ರೆಸ್ ಬೆಂಬಲಿತ ವಿಮಲ ಸ್ಪರ್ಧಿಸಿದ್ದರು. ಜಯಶ್ರೀ ಅವರು 6 ಮತಗಳನ್ನು ಪಡೆಯುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News