×
Ad

ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

Update: 2023-07-26 23:38 IST

ಮಮತ ಗಟ್ಟಿ

ಸುಳ್ಯ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಘಟನೆಯ ಕೆಪಿಸಿಸಿ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತ ಗಟ್ಟಿ ನೇಮಕಗೊಂಡಿದ್ದಾರೆ.

ಸುಳ್ಯ ಹಾಗೂ ಕಡಬ ಬ್ಲಾಕ್ ಒಳಗೊಂಡ ಸುಳ್ಯ ವಿಧಾನಸಭಾ ಕ್ಷೇತ್ತದ ಕೆಪಿಸಿಸಿ ಉಸ್ತುವಾರಿಯಾಗಿ ಮಮತ ಗಟ್ಟಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಅವರಿಗೆ ನೀಡಲಾಗಿದೆ. ಈ ಹಿಂದೆ ಸುಳ್ಯ ಹಾಗೂ ಕಡಬ ಬ್ಲಾಕ್‍ಗಳಿಗೆ ಪ್ರತ್ಯೇಕ ಕೆಪಿಸಿಸಿ ಸಂಯೋಜಕರನ್ನು ನೇಮಕ ಮಾಡಲಾಗಿತ್ತು. ಇದೀಗ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯವರನ್ನೇ ಉಸ್ತುವಾರಿಯಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News