×
Ad

ಮಂಗಳೂರು | ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ʼರಾಷ್ಟ್ರೀಯ ಶಿಕ್ಷಣ ದಿನಾಚರಣೆʼ

ʼಸಮನ್ವಯ ಶಿಕ್ಷಕ ಪ್ರಶಸ್ತಿ- 2025ʼ ಪ್ರದಾನ

Update: 2025-11-13 14:17 IST

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಮಂತ್ರಿಗಳಾಗಿದ್ದ ʼಭಾರತ ರತ್ನʼ ಮೌಲಾನ ಅಬುಲ್ ಕಲಾಂ ಆಝಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು.

ಮಂಗಳೂರಿನ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮನ್ವಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಕ್ಬರ್ ಅಲಿ ವಹಿಸಿದ್ದರು. ಜಮೀಯ್ಯತುಲ್ ಫಲಾಹ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೊತೆ ಕಾರ್ಯದರ್ಶಿ ಅಬ್ದುಲ್ ವಹಾಬ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್ ಅವರು ಮಾತನಾಡಿ, ʼಮೌಲಾನಾ ಆಝಾದ್ ಅವರು ಭಾರತದ ಸ್ವಾತಂತ್ರಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿದ ಓರ್ವ ಮಾಹಾಮೇಧಾವಿ. ಅವರ ದೂರದೃಷ್ಟಿಯ ಫಲವಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗದಂತಹ ಪ್ರತಿಷ್ಠಿತ ಸಂಸ್ಥೆಗಳನ್ನು‌ ಕಾಣಲು ಸಾಧ್ಯವಾಯಿತುʼ ಎಂದು ಹೇಳಿದರು.

ಸರಕಾರಿ ಪದವಿ ಪೂರ್ವ ಕಾಲೇಜು ಪುತ್ತೂರು ಇಲ್ಲಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಗ್ಗ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸಮೀವುಲ್ಲಾ ಅವರು ಮೌಲಾನ ಅಬುಲ್ ಕಲಾಂ ಆಝಾದ್ ಅವರ ಜೀವನ ಮತ್ತು ಸಾಧನೆಯ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮೆಲ್ಕಾರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್ ಅವರಿಗೆ ʼಸಮನ್ವಯ ಶಿಕ್ಷಕ ಪ್ರಶಸ್ತಿ- 2025ʼನ್ನು ಪ್ರದಾನ ಮಾಡಲಾಯಿತು.

ನಿವೃತ್ತ ಶಿಕ್ಷಕರಾದ ಅಬ್ದುಲ್ ಮುಬಾರಕ್(ಸರಕಾರಿ .ಹಿ.ಪ್ರಾ.ಶಾಲೆ, ಪಾಟ್ರಕೋಡಿ, ಬಂಟ್ವಾಳ ), ಫಾತಿಮಾ ಯು (ಅನುದಾನಿತ ಮೊಗವೀರ ಹಿರಿಯ ಪ್ರಾಥಮಿಕ ಶಾಲೆ, ಉಳ್ಳಾಲ), ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಹಶಿ ಕ್ಷಕ ಆದಂ (ಸರ್ಕಾರಿ ಪ್ರೌಢಶಾಲೆ ಸರಪಾಡಿ), ಮಂಗಳೂರು ಯೇನಪೋಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ.ಮೈನಾಝ್ ನವಾಝ್, ರಾಜ್ಯಪಾಲರ ಗೌರವ ಪುರಸ್ಕಾರಕ್ಕೆ ಪಾತ್ರರಾದ ದಕ್ಷಿಣ ಕನ್ನಡ ಜಿಲ್ಲೆಯ ಸ್ಕೌಟ್ ಆಯುಕ್ತ ರಾದ ಬಿ.ಎಂ.ತುಂಬೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಪದಾಧಿಕಾರಿಗಳು, ಬಂಟ್ವಾಳ ಮತ್ತು ಉಳ್ಳಾಲ ಘಟಕದ ಸದಸ್ಯರು ಉಪಸ್ಥಿತರಿದ್ದರು.

ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಮನ್ವಯ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿಗಳಾದ ಮುಹಮ್ಮದ್ ಶಾಹಿದ್ ಸ್ವಾಗತಿಸಿದರು. ಕೋಶಾಧಿಕಾರಿಗಳಾದ ಮುಹಮ್ಮದ್ ಇಕ್ಬಾಲ್ ವಂದಿಸಿದರು. ಉಪಾಧ್ಯಕ್ಷರಾದ ಮುಹಮ್ಮದ್ ಮನಾಝಿರ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News