×
Ad

ಮಂಗಳೂರು: 262 ಸಕ್ರಿಯ ರೌಡಿಗಳ ಪರೇಡ್

Update: 2023-10-12 18:53 IST

ಮಂಗಳೂರು,ಅ.12: ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 262 ಸಕ್ರಿಯ ರೌಡಿಗಳನ್ನು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಪರೇಡ್ ಮಾಡಿಸಲಾಯಿತು.

ಮಂಗಳೂರು ನಗರ ಕೇಂದ್ರ, ಮಂಗಳೂರು ನಗರ ಉತ್ತರ, ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿಗಳು ರೌಡಿಗಳನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ರ ಮುಂದೆ ಹಾಜರುಪಡಿಸಿದರು.

ರೌಡಿಗಳ ಅಪರಾಧ, ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಖುದ್ದು ವಿಚಾರಣೆ ನಡೆಸಿದ ಆಯುಕ್ತರು ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕು. ಇನ್ನು ಮುಂದೆ ಯಾವು ದಾದರೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದರು.

ಈ ಸಂದರ್ಭ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ಬಿಪಿ ದಿನೇಶ್ ಕುಮಾರ್ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು. 






 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News