×
Ad

ಮಂಗಳೂರು: ಹೊಟೇಲ್ ಬಿಲ್ಡಿಂಗ್‌ನಲ್ಲಿ ಬೆಂಕಿ ಅನಾಹುತ

Update: 2024-09-27 20:16 IST

ಸಾಂದರ್ಭಿಕ ಚಿತ್ರ

ಮಂಗಳೂರು, ಸೆ.27: ನಗರದ ಎಂಜಿ ರಸ್ತೆಯ ಬಹುಮಹಡಿಯ ಹೊಟೇಲ್ ಕಟ್ಟಡವೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅನಾಹುತ ಸಂಭವಿಸಿರುವುದಾಗಿ ವರದಿಯಾಗಿದೆ.

9 ಅಂತಸ್ತಿನ ಈ ಹೊಟೇಲಿನ ಕಿಚನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ವರ್ಗವು ಕಾರ್ಯಾಚರಣೆ ಆರಂಭಿಸಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಮುನ್ನೆಚ್ಚರಿಕೆಯ ಕ್ರಮವಾಗಿ ಸಿಬ್ಬಂದಿ ವರ್ಗವನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.


Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News