×
Ad

ಮಂಗಳೂರು: ದ್ವಿಚಕ್ರ ವಾಹನಕ್ಕೆ ಸರಕಾರಿ ಬಸ್ ಢಿಕ್ಕಿ

Update: 2023-07-20 21:18 IST

ಮಂಗಳೂರು, ಜು.20: ನಗರದ ಪಿವಿಎಸ್ ಬಳಿಯ ಎಂಜಿ ರಸ್ತೆಯಲ್ಲಿ ಸರಕಾರಿ ಬಸ್ಸೊಂದು ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ.

ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕೇರಳದ ಸರಕಾರಿ ಬಸ್ ಇನ್ನೊಂದು ಬಸ್ಸನ್ನು ಓವರ್‌ಟೇಕ್ ಮಾಡುವ ಭರಾಟೆಯಲ್ಲಿ ಪಿವಿಎಸ್ ಜಂಕ್ಷನ್‌ನಿಂದ ಎಂಜಿ ರಸ್ತೆಗೆ ಆಗಮಿಸಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ. ಇದರಿಂದ ಪಕ್ಕದಲ್ಲಿದ್ದ ಇನ್ನೊಂದು ದ್ವಿಚಕ್ರ ವಾಹನವೂ ಮಗುಚಿ ಬಿದ್ದಿದೆ.

ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ತೆರಳಿ ನೋ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದಕ್ಕೆ ಸವಾರನ ವಿರುದ್ಧವೇ ಪ್ರಕರಣ ದಾಖಲಿಸಿ ಸರಕಾರಿ ಬಸ್ಸನ್ನು ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News