×
Ad

ಮಂಗಳೂರು: ಪ್ರತ್ಯೇಕ ಪ್ರಕರಣ; ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

Update: 2023-08-25 23:01 IST

ಜಗದೀಶ್ ಪೂಜಾರಿ - ಅಭಿಜಿತ್

ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು: ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿ ಬೋಳಾರ ಅರೇಕೆರೆಬೈಲ್‌ನ ಅಭಿಜಿತ್ ಯಾನೆ ಅಭಿ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆ.23ರಂದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News