ಮಂಗಳೂರು | ಅಕಾಡಮಿಯಿಂದ ತುಳು ಶಿಕ್ಷಕರ ಪ್ರೋತ್ಸಾಹಧನ ಬಿಡುಗಡೆ
ಮಂಗಳೂರು, ನ.21: ದ.ಕ. ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ಶಿಕ್ಷಕರ 2024-25ನೇ ಸಾಲಿನ ಪ್ರೋತ್ಸಾಹಧನ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
ಎರಡೂ ಜಿಲ್ಲೆಯ 31 ಸರಕಾರಿ, ಖಾಸಗಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ (ಸ್ಟೇಟ್ ಸಿಲೆಬಸ್) ತುಳು ಬೋಧಿಸುವ ಶಿಕ್ಷಕರಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಈ ಅನುದಾನವನ್ನು ಒದಗಿಸಲಾಗಿದೆ. ಶಾಲೆಗಳಲ್ಲಿ ತುಳು ಕಲಿಕಾ ಕಾರ್ಯಕ್ರಮ ಯೋಜನೆಯ ಅನ್ವಯ ಅಕಾಡಮಿಯ ವಾರ್ಷಿಕ ಅನುದಾನದಿಂದ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
2010ರ ಬಳಿಕ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಬೋಧಿಸಲಾಗುತ್ತಿದೆ. ಕಳೆದ ಬಾರಿ 847 ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತುಳು ಪಠ್ಯವನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.