×
Ad

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಆರೋಪ; ಓರ್ವ ಸೆರೆ

Update: 2023-10-20 21:29 IST

ಮಂಗಳೂರು, ಅ.20: ಆಸ್ಟ್ರೇಲಿಯ ಮತ್ತು ಪಾಕಿಸ್ತಾನ ತಂಡಗಳ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಬೆಟ್ಟಿಂಗ್‌ಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಕದ್ರಿ ಕಂಬಳ ನಿವಾಸಿ ಕಿರಣ ಬಾಬು(42) ಬಂಧಿತ ಆರೋಪಿ.

ಬಂಟ್ಸ್ ಹಾಸ್ಟೇಲ್ ಬಳಿ ಸಾರ್ವಜನಿಕ ಸ್ಥಳ ಒಂದರಲ್ಲಿ ಆರೋಪಿ ಕಿರಣ ಬಾಬು ಬೆಟ್ಟಿಂಗ್‌ಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು ಬೆಟ್ಟಿಂಗ್‌ಗೆ ಸಾರ್ವಜನಿಕರಿಂದ ಸಂಗ್ರಹಿಸಿದ್ದ ಹಣ 1 ಸಾವಿರ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಪೂರ್ವ ಪೊಲೀಸ್ ಠಾಣೆಯ ಪಿಎಸ್‌ಐ ಯೋಗಿಶ್ವರನ್ , ಸಿಬ್ಬಂದಿ ರಮೇಶ್ ಮತ್ತು ಸುರೇಶ್ ಕಾರ್ಯಾಚರಣೆ ನಡೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News