×
Ad

ಮಂಗಳೂರು : ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Update: 2023-09-16 23:02 IST

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ತ್ರಿಶೂರು ಮೂಲದ ತನ್ವೀರ್(20) ಮತ್ತು ಕೋಝಿಕೋಡ್ ಮೂಲದ ಸಾಯಿಕೃಷ್ಣ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ತನ್ವೀರ್ ವಶದಲ್ಲಿದ್ದ 1.42 ಗ್ರಾಂ ಎಂಡಿಎಂಎ ಮತ್ತು ಒಂದು ಮೊಬೈಲ್ ಹಾಗೂ ಸಾಯಿಕೃಷ್ಣ ಎಂಬಾತನ ವಶದಲ್ಲಿದ್ದ 1.35 ಗ್ರಾಂ ಎಂಡಿಎಂಎ , ಮೊಬೈಲ್ ಸಹಿತ ಮಾದಕ ವಸ್ತು ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಒಟ್ಟು ಸೊತ್ತುಗಳ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News