×
Ad

ಮಂಗಳೂರು: ವಿದ್ಯಾರ್ಥಿಗಳ ಮೇಲೆ ಹಲ್ಲೆ; ಮತ್ತೆ ಪುಂಡರ ಅಟ್ಟಹಾಸ

Update: 2024-01-19 20:43 IST

ಮಂಗಳೂರು: ಕದ್ರಿ ಪಾರ್ಕ್‌ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ನಿತಿನ್ (18), ಹರ್ಷಾ (18) ಮತ್ತು ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಳಗ್ಗೆ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಮತ್ತು ದೇರಳಕಟ್ಟೆಯ ನರ್ಸಿಂಗ್ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೇರಳಕಟ್ಟೆಯಿಂದ ಜೊತೆಯಾಗಿ ಬಸ್‌ನಲ್ಲಿ ಮಂಗಳೂರಿಗೆ ಬಂದಿದ್ದರು. ಅದೇ ಬಸ್‌ನಲ್ಲಿ ಅವರನ್ನು ಹಿಂಬಾಲಿಸುತ್ತಾ ಬಂದ ತಂಡ ಇವರು ಕದ್ರಿ ಪಾರ್ಕ್‌ಗೆ ಹೋಗುತ್ತಿದ್ದಾಗ ಪಾರ್ಕ್ ರಸ್ತೆಯಲ್ಲೇ ತಡೆದು ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವೇಳೆ ಹಲ್ಲೆಗೊಳಗಾದ ವಿದ್ಯಾರ್ಥಿಗಳು ರಿಕ್ಷಾದಲ್ಲಿ ಹೋಗಲು ಯತ್ನಿಸಿದಾಗ ಮತ್ತೆ ತಂಡ ಅವರನ್ನು ಎಳೆದಾಡಿ ಗೂಂಡಾಗಿರಿ ನಡೆಸಿದೆ ಎಂದು ತಿಳಿದು ಬಂದಿದೆ.

ಮಾಹಿತಿ ಪಡೆದ ಕದ್ರಿ ಠಾಣಾ ಪಿಎಸ್‌ಐ ಉಮೇಶ್ ಕುಮಾರ್ ಹಾಗೂ ತಂಡ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳಿಬ್ಬರನ್ನು ರಕ್ಷಿಸಿದ್ದಾರೆ. ಹಲ್ಲೆ ನಡೆಸಿದ ತಂಡದಲ್ಲಿದ್ದ ಬಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News