×
Ad

ಮಂಗಳೂರು | ಬೀದಿ ನಾಯಿಗಳ ಬಗ್ಗೆ ಮಾಹಿತಿ ನೀಡಲು ಬಜಪೆ ಪ.ಪಂ ಮುಖ್ಯಾಧಿಕಾರಿ ಸೂಚನೆ

Update: 2025-11-21 18:47 IST

ಸಾಂದರ್ಭಿಕ ಚಿತ್ರ (Photo: PTI)

ಮಂಗಳೂರು,ನ.21: ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳ, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಆಯಾ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿ ನೀಡಲು ಮುಖ್ಯಾಧಿಕಾರಿ/ಪೌರಾಯುಕ್ತರಿಗೆ ಸೂಚಿಸಿದ್ದಾರೆ.

ಆಯಾ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಆಯಾ ಸಂಸ್ಥೆಯ ವತಿಯಿಂದ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಯಾವುದೇ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಸಂಸ್ಥೆಗಳ ವಿರುದ್ಧ ಕಾನುನು ಕ್ರಮ ಕೈಗೊಳ್ಳಲಾಗುವುದು ಎಂದು ಬಜಪೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News