ಮಂಗಳೂರು| ಭಾರತ ಸೇವಾದಳ ವತಿಯಿಂದ ಸೇವಾದಳ ಸಪ್ತಾಹ ಕಾರ್ಯಕ್ರಮ
Update: 2025-12-28 23:26 IST
ಮಂಗಳೂರು: ದಕ್ಷಿಣ ಕನ್ನಡ ಭಾರತ ಸೇವಾದಳ ವತಿಯಿಂದ ರವಿವಾರ ನಗರದ ತೋಟ ಬೆಂಗ್ರೆಯಲ್ಲಿರುವ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವಾದಳ ಸಪ್ತಾಹ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ರಾಮಕೃಷ್ಣ ಅವರು ವಹಿಸಿದ್ದರು. ಅತಿಥಿಗಳಾಗಿ ಬೆಂಗ್ರೆ ಮಹಾಜನ ಅಧ್ಯಕ್ಷ ಸಂಜಯ್ ಸುವರ್ಣ, ಭಾರತ ಸೇವಾದಳ ತಾಲೂಕು ಅಧ್ಯಕ್ಷ ಪ್ರಭಾಕರ್ ಶ್ರೀಯಾನ್, ಜಿಲ್ಲಾ ಸಂಘಟಕ ಮಂಜೇಗೌಡ, ಸದಸ್ಯ ಸುನಿಲ್ ದೇವಾಡಿಗ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮೀ ಸ್ವಾಗತಿಸಿ, ಸಹ ಶಿಕ್ಷಕಿ ಅಶ್ವಿನಿ ವಂದಿಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ಸೇವಾದಳದ ಸಪ್ತಾಹ ಪ್ರಯುಕ್ತ ಯೋಗಾಸನ ಸ್ಪರ್ಧೆ ನಡೆಯಿತು. ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.