ಮಂಗಳೂರು | ವಿ.ವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮರಗಳ ತೆರವು : ಅಹವಾಲು ಸಭೆ
Update: 2025-05-29 21:51 IST
ಸಾಂದರ್ಭಿಕ ಚಿತ್ರ
ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ಕೊಣಾಜೆ- ಉಳ್ಳಾಲ ತಾಲೂಕು ಇಲ್ಲಿನ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ (ಖಿಖಏಅ)ಯೋಜನೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅಡಚಣೆಯಾಗಿರುವ 50 ಕ್ಕಿಂತ ಹೆಚ್ಚು ಗಿಡ, ಮರಗಳನ್ನು ಗುರುತಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ನಿಯಮ 8(3)ರಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ.
ಜೂ.10ರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ತಾಲೂಕು ಕೊಣಾಜೆ ಗ್ರಾಮದ ಮಂಗಳೂರು ವಿಶ್ವವಿದ್ಯಾನಿಲಯದ ರಾಜಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ ಎಂದು ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟನೆ ತಿಳಿಸಿದೆ.