×
Ad

ಮಂಗಳೂರು | ಹಾಸ್ಯಗಾರ ವಳಕುಂಜರಿಗೆ ಕದ್ರಿ ವಿಷ್ಣು ಪ್ರಶಸ್ತಿ

Update: 2025-11-18 16:48 IST

ಮಂಗಳೂರು, ನ.18: ಸುಮಾರು 28 ವರ್ಷಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆಯನ್ನೂ ಪಡೆಯದೆ ದಾಖಲೆ ಮಾಡಿರುವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಅವರಿಗೆ ಕದ್ರಿ ವಿಷ್ಣು ಪ್ರಶಸ್ತಿ -2025 ನೀಡಿ ಗೌರವಿಸಲಾಯಿತು.

ಕಳೆದ 9 ವರ್ಷಗಳಿಂದ ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ ಯಕ್ಷ ಬಳಗವು ಕೊಡಮಾಡುವ ಕದ್ರಿ ವಿಷ್ಣು ಪ್ರಶಸ್ತಿಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಲಕ್ಷ್ಮಿ ನಾರಾಯಣ ಆಸ್ರಣ್ಣ ಪ್ರದಾನಿಸಿದರು.

ಕದ್ರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯ ಡಾ.ಜಯಶಂಕರ್ ಮಾರ್ಲ, ಲೀಲಾಕ್ಷ ಬಿ.ಕರ್ಕೇರ, ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಸಿ.ಎಸ್.ಭಂಡಾರಿ, ರವೀಂದ್ರನಾಥ್ ಶೆಟ್ಟಿ, ರವೀಂದ್ರ ಶೇಟ್, ಸುಣ್ಣಟಬಳ ವಿಶ್ವೇಶ್ವರ ಭಟ್, ಜಯಶೀಲ ಅಡ್ಯಂತಾಯ, ಮೂಲ್ಕಿ ಕರುಣಾಕರ ಶೆಟ್ಟಿ, ದಿವಾಕರ ಶೆಟ್ಟಿ ಪರಾರಿಗುತ್ತು ಅತಿಥಿಗಳಾಗಿ ಭಾಗವಹಿಸಿದ್ದರು.

ಯಕ್ಷ ಬಳಗದ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಕದ್ರಿ ಯಕ್ಷ ಬಳಗದ ಗೌರವಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ತಾರಾನಾಥ ಶೆಟ್ಟಿ ಬೋಳಾರ, ಶಿವಪ್ರಸಾದ್ ಪ್ರಭು, ಎಲ್ಲೂರು ರಾಮಚಂದ್ರ ಭಟ್, ಸುಧಾಕರ್ ಶೆಟ್ಟಿ ದೋಣಿಂಜೆ ಗುತ್ತು, ಕೃಷ್ಣ ಶೆಟ್ಟಿ ತಾರೆಮಾರ್, ಹರೀಶ್ ಕುಮಾರ್, ನಿವೇದಿತಾ ಎನ್. ಶೆಟ್ಟಿ, ಬೆಟ್ಟಂಪಾಡಿ ಸುಂದರ ಶೆಟ್ಟಿ, ಮಧುಸೂದನ ಅಲೆವೂರಾಯ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯಾಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ ರಾವ್ ಪೇಜಾವರ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News