×
Ad

ಮಂಗಳೂರು: ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ

Update: 2024-01-04 19:30 IST

ಜಗದೀಶ್ ಶೆಟ್ಟಿ

ಮಂಗಳೂರು: ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಕಾರ್ಪೊರೇಟರ್, ಬಿಜೆಪಿ ನಾಯಕ ಜಗದೀಶ್ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಖಾಸಗಿ ಹೋಟೆಲೊಂದರ ಮುಂಭಾಗದಲ್ಲಿ ಕಾರಿನಲ್ಲಿ ಕುಳಿತು ಜಗದೀಶ್ ಶೆಟ್ಟಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News