×
Ad

ಮಂಗಳೂರು: ಡ್ರಗ್ಸ್ ಸೇವನೆ ಪ್ರಕರಣ; 15 ಮಂದಿ ಸೆರೆ

Update: 2023-11-06 21:37 IST

ಮಂಗಳೂರು, ನ.6: ನಗರ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಡ್ರಗ್ಸ್ ಸೇವನೆ ಪ್ರಕರಣಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 15 ಮಂದಿಯನ್ನು ಬಂಧಿಸಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್, ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ನಾಯಕ್ ಮತ್ತು ನಗರ ಅಪರಾಧ ಪತ್ತೆ ದಳದ ಎಸಿಪಿ ಪಿ.ಎ. ಹೆಗ್ಡೆ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು.

ಈ ತಂಡವು ಲಾಡ್ಜ್, ಪಬ್, ಹೊಟೇಲ್, ಹೋಂಸ್ಟೇ, ರೆಸಾರ್ಟ್, ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್‌ಮೆಂಟ್‌ಗಳನ್ನು ಪರಿಶೀಲಿಸಿ 56 ಶಂಕಿತ ವ್ಯಕ್ತಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ವೈದ್ಯಕೀಯ ವರದಿಯ ಆಧಾರದಲ್ಲಿ 15 ಮಂದಿಯನ್ನು ಬಂಧಿಸಿವೆ. ಅಲ್ಲದೆ ಎನ್‌ಡಿಪಿಎಸ್ ಕಾಯ್ದೆ ಸೆಕ್ಷನ್ 27 (ಬಿ)ನಡಿ 12 ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಂದ 7 ಮೊಬೈಲ್, 2 ದ್ವಿಚಕ್ರ ವಾಹನಗಳನ್ನು ವಶಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News