×
Ad

ಮಂಗಳೂರು : ಜಮೀಯ್ಯತುಲ್ ಫಲಾಹ್ ಮಹಿಳಾ ವಸತಿ ನಿಲಯ ಕಟ್ಟಡಕ್ಕೆ ಶಿಲಾನ್ಯಾಸ

Update: 2025-12-21 16:19 IST

ಮಂಗಳೂರು, ಡಿ.21: ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ ವತಿಯಿಂದ ನಗರದ ಮಿಶನ್ ಕಂಪೌಂಡ್ ನಲ್ಲಿ ನಿರ್ಮಿಸಲುದ್ದೇಶಿಸಿರುವ ಜಮೀಯ್ಯತುಲ್ ಫಲಾಹ್ ಮಹಿಳಾ ವಸತಿ ನಿಲಯ ಕಟ್ಟಡಕ್ಕೆ ರವಿವಾರ ಶಿಲಾನ್ಯಾಸ ನೆರವೇರಿಸಲಾಯಿತು.

 

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಶಿಲಾನ್ಯಾಸ ನೆರವೇರಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ನ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಮಾತನಾಡಿ ‘ಜಮೀಯ್ಯುತುಲ್ ಫಲಾಹ್ ಸಂಸ್ಥೆಯು ಶೈಕ್ಷಣಿಕ , ಆರೋಗ್ಯ ಕ್ಷೇತ್ರಗಳಲ್ಲಿ ಕೈಗೊಂಡಿರುವ ಸೇವೆಯನ್ನು ಶ್ಲಾಘಿಸಿದರು.

ಶಿಕ್ಷಣ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡದಿರುವ ಕಾರಣದಿಂದಾಗಿ ಮುಸ್ಲಿಮ್ ಸಮುದಾಯದ ಹೆಣ್ಣುಮಕ್ಕಳು ಶಿಕ್ಷಣದಲ್ಲಿ ಹಿಂದುಳಿಯಲು ಒಂದು ಕಾರಣವಾಗಿದೆ. ಇವತ್ತು ಹೆಣ್ಣುಮಕ್ಕಳು ನಾನಾ ಸವಾಲುಗಳ ನಡುವೆ ಶಿಕ್ಷಣ ಪಡೆದು, ಉದ್ಯೋಗ ಗಿಟ್ಟಿಸಿಕೊಳ್ಳುತ್ತಿದ್ದಾರೆ. ರಾಜ್ಯದ ಇತರ ಜಿಲ್ಲೆಗಳಿಗಿಂತ ದ.ಕ. ಜಿಲ್ಲೆ ಮುಸ್ಲಿಮ್ ಸಮುದಾಯ ಹೆಣ್ಣುಮಕ್ಕಳು ಶೈಕ್ಷಣಿಕವಾಗಿ ಹೆಚ್ಚು ಮುಂದುವರಿದಿದ್ದಾರೆ. ಹೆಣ್ಣು ಮಕ್ಕಳಿಗೆ ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟೆಲ್ ಕೊರತೆ ಇರುವುದನ್ನು ಮನಗಂಡು ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆಯನ್ನು ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕವು ನಿರ್ಮಿಸುವ ಯೋಜನೆ ಹಾಕಿಕೊಂಡಿರುವುದು ಶ್ಲಾಘನೀಯ. ಇದಕ್ಕಾಗಿ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದರು.

ಯೆನೆಪೊಯ ವಿವಿ ಕುಲಪತಿ ಡಾ.ವೈ.ಅಬ್ದುಲ್ಲ ಕುಂಞಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನ ನೀಡುವ ಮೂಲಕ ಮುಸ್ಲಿಮ್ ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಜಮೀಯ್ಯತುಲ್ ದೊಡ್ಡ ಕೊಡುಗೆ ನೀಡಿದೆ. ಪ್ರತಿಭಾವಂತರಾಗಿದ್ದರೂ ಶಿಕ್ಷಣಕ್ಕೆ ಸೂಕ್ತ ವ್ಯವಸ್ಥೆ, ಹಾಸ್ಟೆಲ್ ಕೊರತೆ ಕಾರಣದಿಂದಾಗಿ ಆನೇಕ ಹೆಣ್ಣು ಮಕ್ಕಳು ಶಿಕ್ಷಣವನ್ನು ಅರ್ಧದಲ್ಲಿ ಮೊಟಕುಗೊಳಿಸಬೇಕಾದ ಪರಿಸ್ಥಿತಿ ನಮ್ಮಲ್ಲಿ ಇನ್ನೂ ಇದೆ. ಈ ಸಮಸ್ಯೆ ನಿವಾರಿಸಲು ಜಮೀಯ್ಯತುಲ್ ಫಲಾಹ್ ನಗರ ಘಟಕವು ಹೆಣ್ಣು ಮಕ್ಕಳಿಗೆ ಮತ್ತು ಉದ್ಯೋಗಸ್ಥ ಮಹಿಳೆಯರಿಗಾಗಿ ಸುರಕ್ಷಿತ ಸ್ಥಳದಲ್ಲಿ ಸುಸಜ್ಜಿತ ಹಾಸ್ಟೆಲ್ ಅನ್ನು ನಿರ್ಮಿಸುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಂಡಿರುವುದು ಶ್ಲಾಘನೀಯ ಎಂದರು.

ಕರ್ನಾಟಕ ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲ್ನ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ , ಜುಬೈಲ್ ನ ಎಕ್ಸ್ ಪರ್ಟೈಸ್ ಗ್ರೂಪ್ ಸಿಇಒ ಕೆ.ಎಸ್.ಶೇಖ್ ಕರ್ನಿರೆ, ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್ ಶುಭ ಹಾರೈಸಿದರು.

 ಜುಬೈಲ್ ನ ಅಲ್ ಮುಝೈನ್ ಗ್ರೂಪ್ ನ ಆಡಳಿತ ನಿರ್ದೇಶಕ ಝಕರಿಯಾ ಜೋಕಟ್ಟೆ, ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಬಿಸಿಸಿಐ) ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಮನಪಾ ಮಾಜಿ ಸದಸ್ಯ ನವೀನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಾಸ್ಟೆಲ್ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ರಿಯಾಝ್ ಬಾವಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ ಅಧ್ಯಕ್ಷ ಸೈಯದ್ ಅಶ್ಫಾಕ್ ಅಹ್ಮದ್ ಸ್ವಾಗತಿಸಿದರು, ಕಾರ್ಯದರ್ಶಿ ಮುಹಮ್ಮದ್ ಹನೀಫ್ ಮಾಸ್ಟರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಮ್ತಿಯಾಝ್ ಖತೀಬ್ ವಂದಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News