×
Ad

ಮಂಗಳೂರು: ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು; ಆರೋಪಿ ಸೆರೆ

Update: 2023-08-19 22:14 IST

ಮಂಗಳೂರು, ಆ.19: ನಗರದ ಅಳಕೆ ನ್ಯೂಚಿತ್ರಾ ಸಮೀಪದ ಜನನಿಬಿಡ ವಸತಿ ಸಂಕೀರ್ಣದ ಬಳಿ ಗ್ಯಾಸ್ ಸಿಲಿಂಡರನ್ನು ಅಕ್ರಮವಾಗಿ ದಾಸ್ತಾನಿರಿಸಿದ ಆರೋಪಿ ಶೇಖ್ ಅಶಫುದ್ದೀನ್‌ನನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಂಗಳೂರು ಗ್ಯಾಸ್ ಲೈಟ್ ಆ್ಯಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಅರ್ಧ ಗ್ಯಾಸ್ ತುಂಬಿದ 3 ಗೃಹ ಬಳಕೆಯ ಇಂಡೇನ್ ಮತ್ತು ಹೆಚ್‌ಪಿ ಗ್ಯಾಸ್ ಸಿಲಿಂಡರ್ ಸಹಿತ 26 ವಿವಿಧ ಆಳತೆಯ ಗ್ಯಾಸ್ ಸಿಲಿಂಡರ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕದ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News