×
Ad

ಮಂಗಳೂರು: ಬಂಟರ ಮಾತೃ ಸಂಘದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ

Update: 2023-09-19 14:28 IST

ಮಂಗಳೂರು, ಸೆ.19: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಗಣೇಶೋತ್ಸವ ಆಯೋಜಿಸಲಾಗಿದೆ.

ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಮತ್ತು ಸೌಮ್ಯಾ ಜೆ. ರೈ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜವನ್ನು ಒಂದುಗೂಡಿಸಲು ಇಂತಹ ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ. ಅಜಿತ್ ಕುಮಾರ್ ರೈ ಮಾಲಾಡಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೆಲ್ಲವೂ ಕಾರ್ಯಗತಗೊಳ್ಳಲಿ ಎಂದು ಹಾರೈಸಿದರು.

ಶ್ರೀ ವೈಷ್ಣವಿ ದುರ್ಗಾ ದೇವಸ್ಥಾನ ದಶರಥ ನಗರ ಮಣಿಪಾಲದ ಆಡಳಿತ ಮೊಕ್ತೇಸರ ಬಿ.ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ. ಹೆಗ್ಡೆ ತೆನೆ ವಿತರಿಸಿದರು. ಇ.ಎಸ್.ಎಂ. ಸಬ್ ಮೇಜರ್ ಶಶಿಧರ ಆಳ್ವ ಧ್ವಜಾರೋಹಣಗೈದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ.ನಾಗರಾಜ ಶೆಟ್ಟಿ, ಬಿ.ಶೇಖರ ಶೆಟ್ಟಿ, ಸುಧಾಕರ ಎಸ್ ಪೂಂಜಾ, ವಸಂತ ಶೆಟ್ಟಿ, ಶರ್ಮಿಳಾ ಎಸ್. ಆಳ್ವ, ಭಾರತಿ ಜಿ. ಶೆಟ್ಟಿ, ಅರುಣಾ ಎಸ್. ಶೆಟ್ಟಿ, ಆಶಾ ಜ್ಯೋತಿ ರೈ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು.

ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News