×
Ad

ಮಂಗಳೂರು | ಮರಾಠ ಅಭಿವೃದ್ಧಿ ನಿಗಮ: ಹೊಲಿಗೆ ಯಂತ್ರ ವಿತರಣಾ ಯೋಜನೆಗೆ ಅರ್ಜಿ ಆಹ್ವಾನ

Update: 2025-11-18 17:57 IST

ಮಂಗಳೂರು,ನ.18: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವಷರ್ಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರಬಾರದು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುತ್ತದೆ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98,000 ಹಾಗೂ ನಗರ ಪ್ರದೇಶದಲ್ಲಿ ರೂ. 1,20.000 ಗಳನ್ನು ಮೀರಿರಬಾರದು.

ಅಂಗವಿಕಲ ಮಹಿಳೆಯರಿಗೆ ಶೇ.5 ರಷ್ಟು ಮೀಸಲಿರಿಸಲಾಗುತ್ತದೆ. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ33ರಷ್ಟು ವಿಕಲಚೇತನರಿಗೆ ಶೇ.5ರಷ್ಟು ಹಾಗೂ ತೃತೀಯ ಲಿಂಗಳಿಗೆ ಶೇ.1ರಷ್ಟು ಅಂಗವಿಕಲ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಲಾಗುತ್ತದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ ಎಚ್ಐವಿ ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿದ ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಡಿ.6 ಕೊನೆಯ ದಿನ.

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಮಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸಲ್ಲಿಸಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರು ಸಹ ಆನ್‌ಲೈನ್‌ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕು.

ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಲ್ಲಿ ಒಂದು ಸಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್ಸೈಟ್ https://kmcdc.karnataka.gov.in ಅಥವಾ ನಿಗಮದ ಸಹಾಯವಾಣಿ: 8867537799/ ದೂ.ಸಂ:080-29903994 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News