×
Ad

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ

Update: 2023-08-06 22:52 IST

ಉಳ್ಳಾಲ:  ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ರವಿವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶರೀಫ್ ಯಾನೆ ಫೈಝಲ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋರಿಕ್ಷವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ರವರ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣೆ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿ ರಂಜಿತ್, ಅಶೋಕ್, ಮಂಜುನಾಥ್ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News