ಮಂಗಳೂರು: ಕಲ್ಲಿನಿಂದ ಜಜ್ಜಿ ಯುವಕನ ಕೊಲೆ
Update: 2025-04-27 20:30 IST
ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ರವಿವಾರ ಸಂಜೆ ಯುವಕನ ಕೊಲೆ ನಡೆದಿರುವುದಾಗಿ ವರದಿಯಾಗಿದೆ.
ಉತ್ತರ ಭಾರತದ ಮೂಲದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.
ಕ್ರಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎನ್ನಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.