ಮಂಗಳೂರು: ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್‌ಗೆ ಚಾಲನೆ
ಮಂಗಳೂರು, ಡಿ.20: ಅಂಡರ್‌ವಾಟರ್ ಸ್ಪೋಟ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಫಿಸಿಕಲ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ಫಿನ್ ಸ್ವಿಮ್ಮಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿರುವ 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ 2025 ಶನಿವಾರದಂದು ಉದ್ಘಾಟನೆಗೊಂಡಿತು.
ಶಾಸಕ ಡಿ.ವೇದವ್ಯಾಸ ಕಾಮತ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಇಂತಹ ಈಜುಸ್ಪರ್ಧೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಆಯೋಜನೆಯಾಗುತ್ತಿದೆ. ಇದು ಸ್ಥಳೀಯ ಪ್ರತಿಭೆಗಳಿಗೂ ಉತ್ತಮ ಅವಕಾಶವನ್ನು ಒದಗಿಸುತ್ತದೆ ಎಂದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ನಿಟ್ಟೆ ಸಮೂಹ ಸಂಸ್ಥೆಗಳ ಮುಖ್ಯಸ್ಥ ನಿಟ್ಟೆ ವಿನಯ ಹೆಗ್ಡೆ, ಕಾನೂನು ಸಲಹೆಗಾರ ಆಂಶುಮಾನ್ ಅಮರೀಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್, ಹಿಮಾಚಲ ಪ್ರದೇಶದ ಯುಎಸ್‌ಎಫ್‌ಐ ಅಧ್ಯಕ್ಷ ಸೋಮಾಂಶು ಸೂದ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಅದಾನಿ ಗ್ರೂಪ್ ನ ಕಾಪೋರೆಟ್ ವ್ಯವಹಾರಗಳ ಕಾರ್ಯನಿರ್ವಹಣಾ ನಿರ್ದೇಶಕ ಕಿಶೋರ್ ಆಳ್ವ, ಕೆಎಂಸಿ ಆಸ್ಪತ್ರೆಯ ಎಮರ್ಜೆನ್ಸಿ ಸರ್ವಿಸ್ ನ ಕಸ್ಟಮರ್ ಹೆಡ್ ಡಾ. ಜೀದೂ ರಾಧಾಕೃಷ್ಣನ್, ಮಂಗಳೂರು ಸ್ಮಾರ್ಟ್ ಸಿಟಿಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ, ದ.ಕ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಅಂತಾರಾಷ್ಟ್ರೀಯ ಕ್ರೀಡಾಪಟುಗಳಾದ ಧನಲಕ್ಷ್ಮೀ, ಪೂವಮ್ಮ ಎಂ.ಆರ್, ದ.ಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ವಿ ವನ್ ಅಕ್ವಾ ಸೆಂಟರ್ ನ ನಿರ್ದೇಶಕರಾದ ನವೀನ್, ರೂಪಾ ಜಿ.ಪ್ರಭು, ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಷನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಡಾ. ತಪನ್ ಕುಮಾರ್, ಸಂಚಾಲಕ ಬಿ.ಕೃಷ್ಣನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.