×
Ad

ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಕಮೆಂಟ್; ಆರೋಪಿ ಸೆರೆ

Update: 2023-08-03 21:08 IST

ಮಂಗಳೂರು, ಆ.3: ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬಿಕರ್ನಕಟ್ಟೆಯ ಹಿಲ್‌ರೋಡ್ ನಿವಾಸಿ ಸಲ್ಮಾನ್ (22) ಎಂಬಾತನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್‌ರ ಮಾರ್ಗದರ್ಶನದಂತೆ ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಸತೀಶ್ ಎಂಪಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News