×
Ad

ಮಂಗಳೂರು| ಪೋಕ್ಸೊ ಪ್ರಕರಣ: ಆರೋಪಿ ಗಗನ್‌ಗೆ ಜೈಲುಶಿಕ್ಷೆ, ದಂಡ

Update: 2025-01-06 21:43 IST

ಮಂಗಳೂರು: ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೊ ಚಿತ್ರೀಕರಣ ಮಾಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್ ದೇವರಾಜ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

2024ರ ಮಾ.10ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಗಗನ್ (24) ಎಂಬಾತ ರಾತ್ರಿ 8:45ಕ್ಕೆ ಮನೆಯೊಂದರಲ್ಲಿ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಣ ಮಾಡಿದ್ದ. ಮೊಬೈಲ್ ಬೆಳಕು ಕಂಡು ಬಾಲಕಿ ಬೊಬ್ಬೆ ಹೊಡೆದಾಗ ಆಕೆಯ ತಾಯಿ ಓಡಿಬಂದಿದ್ದರು. ಆವಾಗ ಆರೋಪಿ ಓಡಿ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಸೈಗಳಾದ ಗುರಪ್ಪ ಕಾಂತಿ ಮತ್ತು ರೇವಣ್ಣ ಸಿದ್ದಪ್ಪ ಜಿ. ತನಿಖೆ ನಡೆಸಿದ್ದರು. ಎಸ್ಸೈ ಸತೀಶ್ ಕೆ.ಎಸ್. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ನಡೆದು 9 ತಿಂಗಳಲ್ಲೇ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಕಲಂ 354 (ಸಿ) ಅಡಿಯಲ್ಲಿ ಆರೋಪಿಗೆ 1 ವರ್ಷ ಸಾದಾ ಸಜೆ, 20,000 ರೂ.ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಲು ಸೂಚಿಸಿದೆ. ದಂಡದ ಮೊತ್ತದಲ್ಲಿ 10,000 ರೂ.ವಲ್ಲದೆ ಪ್ರತ್ಯೇಕವಾಗಿ 1ಲ.ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News