×
Ad

ಮಂಗಳೂರು ಪ್ರೆಸ್‌ಕ್ಲಬ್ ಸಮಾಚಾರ 7ನೇ ಸಂಚಿಕೆ ಬಿಡುಗಡೆ

Update: 2025-12-26 15:15 IST

ಮಂಗಳೂರು, ಡಿ.26: ಪ್ರೆಸ್‌ಕ್ಲಬ್ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಸಲಾಗುವ ವಿವಿಧ ಕಾರ್ಯಕ್ರಮಗಳ ದಾಖಲೀಕರಣದ ‘ಮಂಗಳೂರು ಪ್ರೆಸ್‌ಕ್ಲಬ್’ ಸಮಾಚಾರದ 7ನೆ ಸಂಚಿಕೆಯನ್ನು ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಳಿಸಲಾಯಿತು.

ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸಂಚಿಕೆ ಬಿಡುಗಡೆ ಗೊಳಿಸಿ, ಪತ್ರಕರ್ತರು ಸಮಾಜದ ಕನ್ನಡಿಯಾಗಿದ್ದು, ಅವರ ಕಾರ್ಯ ಚಟುವಟಿಕೆಗಳನ್ನು ದಾಖಲೆ ಮಾಡುವುದು ಉತ್ತಮ ಕಾರ್ಯ. ಮಾಡಿದ ಕೆಲಸಗಳನ್ನು ಈ ರೀತಿ ದಾಖಲೀಕರಣ ಮಾಡಿದಾಗ ನೆನಪಿಸಿಕೊಳ್ಳಲು ಸಾಧ್ಯ ಆಗುತ್ತದೆ ಎಂದವರು ಹೇಳಿದರು.

ಮುಖ್ಯ ಅತಿಥಿಯಾಗಿ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ಭಾಗವಹಿಸಿದ್ದರು.

ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ನಿರೂಪಿಸಿದರು. ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News