×
Ad

ಮಂಗಳೂರು: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರ ರಕ್ಷಣೆ

Update: 2023-09-28 19:52 IST

ಮಂಗಳೂರು, ಸೆ.28: ನಗರದ ಹಳೆ ಬಂದರು ಧಕ್ಕೆಯಿಂದ 39 ನಾಟಿಕಲ್ ಮೈಲ್ ದೂರದ ಸಮುದ್ರದ ಮಧ್ಯೆ ಸೆ.24ರಿಂದ ಇಂಜಿನ್‌ನ ತಾಂತ್ರಿಕ ತೊಂದರೆಗೆ ಸಿಲುಕಿದ್ದ ಮೀನುಗಾರಿಕಾ ಬೋಟ್ ಮತ್ತು ಮೀನುಗಾರರನ್ನು ಭಾರತೀಯ ಕೋಸ್ಟ್‌ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.

ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು. ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು. ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು. ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿದ ಕೋಸ್ಟ್‌ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ಬುಧವಾರ ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ಪ್ರಕಟನೆ ತಿಳಿಸಿದೆ.






 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News