×
Ad

ಮಂಗಳೂರು: ಮಹಿಳಾ ಪೊಲೀಸ್ ಪೇದೆಗೆ ಲೈಂಗಿಕ ಕಿರುಕುಳ; ಆರೋಪಿ ನಿವೃತ್ತ ಯೋಧ ಪ್ರಶಾಂತ್ ಬಂಧನ

Update: 2023-08-01 20:31 IST

ಪ್ರಶಾಂತ್

ಉಳ್ಳಾಲ: ಮಹಿಳಾ ಪೊಲೀಸ್ ಪೇದೆಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುಂಪಲದ ಬಗಂಬಿಲದಲ್ಲಿ ನಡೆದಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಯ ಕನೀರುತೋಟ ನಿವಾಸಿ, ನಿವೃತ್ತ ಯೋಧ ಪ್ರಶಾಂತ್ (45) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಠಾಣೆಯೊಂದರ ಮಹಿಳಾ ಪೊಲೀಸ್ ಪೇದೆ ಸ್ಕೂಟರ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿದ ನಿವೃತ್ತ ಯೋಧ ಪ್ರಶಾಂತ್, ಆಕೆಯ ಮೈಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದೆ. ಈ ವೇಳೆ ಮಹಿಳಾ ಪೊಲೀಸ್ ಪೇದೆ ಬೊಬ್ಬಿಟ್ಟಾಗ ಸ್ಥಳೀಯರು ಜಮಾಯಿಸಿ ನಿವೃತ್ತ ಯೋಧ ಪ್ರಶಾಂತ್ ನನ್ನು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿವೃತ್ತ ಯೋಧ ಪ್ರಶಾಂತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News