×
Ad

ಮಂಗಳೂರು: ಎಸೆಸೆಲ್ಸಿ ಪರೀಕ್ಷೆ; ಕಪಿತಾನಿಯೋ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

Update: 2024-03-27 11:53 IST

ಮಂಗಳೂರು, ಮಾ.27:  ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ 19 ಕೊಠಡಿಗಳಲ್ಲಾಗಿ 432 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ನಗರದ ಕಪಿತಾನಿಯೋ ಶಾಲೆಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ  ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿಯವರು, ಮಕ್ಕಳಿಗೆ ಕುಡಿಯುವ ನೀರು ಸೇರಿದಂತೆ ಇತರ ಸೌಲಭ್ಯಗಳ ಬಗ್ಗೆ ಕೇಂದ್ರದ ಮುಖ್ಯಸ್ಥರೊಂದಿಗೆ ಮಾಹಿತಿ ಪಡೆದುಕೊಂಡರು. ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ಕ್ರಮ ವಹಿಸುವಂತೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ‌ನಿರ್ದೇಶಕರಾದ ವೆಂಕಟೇಶ್ ಪಟಗಾರ್, ಎಸೆಸೆಲ್ಸಿ ಪರೀಕ್ಷೆಯ ನೋಡಲ್ ಅಧಿಕಾರಿ ವೆಂಕಟೇಶ್ ನಾಯಕ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಡಿಸೋಜಾ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News