×
Ad

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಐದು ಬ್ಯಾರಿ ಪುಸ್ತಕಗಳು ಬಿಡುಗಡೆ

Update: 2025-12-31 20:35 IST

ಮಂಗಳೂರು,ಡಿ.31:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಜ.4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದಲ್ಲಿ ಬ್ಯಾರಿ ಬರಹಗಾರರ ಐದು ಬ್ಯಾರಿ ಕೃತಿಗಳು ಬಿಡುಗಡೆಯಾಗಲಿವೆ.

ಶಮೀಮಾ ಕುತ್ತಾರ್ ಅವರ ಪಡಿಞ್ಞಿರ್ರೊ ಪೂ (ಕಥಾ ಸಂಕಲನ), ಹಸೀನ ಮಲ್ನಾಡ್ ಅವರ ಮಿನ್ನಾಂಪುಲು( ಹನಿಗವನ ಸಂಕಲನ), ಎನ್.ಎಂ. ಹನೀಫ್ ನಂದರಬೆಟ್ಟು ಅವರ ಸಂಪುಕಾತ್‌ (ಕವನ ಸಂಕಲನ), ಬಶೀರ್ ಅಹ್ಮದ್ ಬೆಳ್ಳಾಯಿರು ಅವರ ಬೆಲ್‌ಚ (ಕವನ ಸಂಕಲನ), ಹೈದರಲಿ ಕಾಟಿಪಳ್ಳ ಅವರ ಱನಸೀಅತ್ (ಕವನ ಸಂಕಲನ) ಬಿಡುಗಡೆಗೊಳ್ಳಲಿದೆ ಎಂದು ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News